ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆ

Home

ಉದ್ದೇಶಗಳು

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಮೂಡಿಸುವುದು.
ಪ್ರಚಲಿತ ವೈಜ್ಞಾನಿಕ ವಿದ್ಯಮಾನಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಹೆಚ್ಚಿನ ಅರಿವು ಮೂಡಿಸುವುದು.
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಸೃಜನಶೀಲತೆಯ ಬೆಳವಣಿಗೆಗೆ ಪ್ರೋತ್ಸಾಹ ನೀಡುವುದು.
ವಿಜ್ಞಾನ ಮತ್ತು ತಂತ್ರಜ್ಞಾನಗಳ ವೈಶಿಷ್ಟ್ಯತೆ ಮತ್ತು ಪ್ರಾಮುಖ್ಯತೆಗಳನ್ನು ಪ್ರಚುರ ಪಡಿಸುವುದು.

 

ಕಾರ್ಯಕ್ರಮ

ಈ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಅಕಾಡೆಮಿ ಕಛೇರಿಯಲ್ಲಿ ನಡೆಸಲಾಗುವುದು. ರಾಜ್ಯದ ಇತರೆ ಸ್ಥಳಗಳಲ್ಲಿ ಪದವಿ ವಿಜ್ಞಾನ ಮತ್ತು ತಂತ್ರಜ್ಞಾನ ಕಾಲೇಜುಗಳ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.
ತಜ್ಞರು/ವಿಜ್ಞಾನಿಗಳಿಂದ ಕೇಂದ್ರ ವಿಷಯಕ್ಕೆ ಸಂಬಂಧಿಸಿದ ಎರಡು ವಿಶೇಷ ಉಪನ್ಯಾಸಗಳನ್ನು ಆಯೋಜಿಸಲಾಗುವುದು.


ಕೇಂದ್ರ ವಿಷಯಕ್ಕೆ ಸಂಬಂಧಿಸಿದ ಮಾದರಿ ತಯಾರಿಕೆ, ಪ್ರಬಂಧ, ರಸಪ್ರಶ್ನೆ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಕೆಳಕಂಡಂತೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು:
ಪ್ರಥಮ ಬಹುಮಾನ- ರೂ. 5000/-
ದ್ವಿತೀಯ ಬಹುಮಾನ- ರೂ. 3000/
ತೃತೀಯ ಬಹುಮಾನ- ರೂ. 2000/-

×
ABOUT DULT ORGANISATIONAL STRUCTURE PROJECTS